ಕೊಳ್ಳೇಗಾಲ(ಚಾಮರಾಜನಗರ) :ರಾಜ್ಯಾದ್ಯಂತ ನಾಳೆಯಿಂದ ಅನ್ಲಾಕ್ 3.0 ಜಾರಿಯಾಗಲಿದೆ. ಈ ಹಿನ್ನೆಲೆ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರ ಸಮೀಪದ ಭರಚುಕ್ಕಿ ಜಲಪಾತ ವೀಕ್ಷಣೆಗೆ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಅವಕಾಶ ನೀಡಲಾಗಿದೆ. ಕೊರೊನಾ 2ನೇ ಅಲೆಯ ಭೀಕರತೆಗೆ ಕಳೆದ 2 ತಿಂಗಳಿನಿಂದ ಬಂದ್ ಮಾಡಲಾಗಿದ್ದ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಭರಚುಕ್ಕಿ ಜಲಪಾತ ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ.
ಮಾಸ್ಕ್ ಹಾಕಿದ್ರೆ ಮಾತ್ರ ಎಂಟ್ರಿ
ಈಗಾಗಲೇ ಕೊರೊನಾ 2ನೇ ಅಲೆಗೆ ತತ್ತರಿಸಿ ಹೋಗಿದ್ದ ಎಲ್ಲಾ ಚಟುವಟಿಕೆಗಳು ಹಂತ ಹಂತವಾಗಿ ಪುಟಿದೇಳುತ್ತಿವೆ. ಪ್ರವಾಸೋಧ್ಯಕ್ಕೂ ಅವಕಾಶ ನೀಡಲಾಗಿದೆ. ಆದರೆ, ಪ್ರವಾಸಿ ತಾಣಗಳಲ್ಲಿ ಕೋವಿಡ್-19 ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಈ ಹಿನ್ನೆಲೆ ಜಲಪಾತ ವೀಕ್ಷಣೆಗೆ ಆಗಮಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಿದೆ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ.