ಚಾಮರಾಜನಗರ:ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮರಿಯಾಲ ಮೇಲ್ಸೇತುವೆ
ಬಳಿ ನಡೆದಿದೆ.
ಕೆಟ್ಟು ನಿಂತ ಲಾರಿಗೆ ಬೈಕ್ ಡಿಕ್ಕಿ... ತಮ್ಮ ಸಾವು, ಸಹೋದರಿಗೆ ಗಂಭೀರ ಗಾಯ - ಚಾಮರಾಜನಗರ ಸುದ್ದಿ
ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಆತನ ಸಹೊದರಿ ಗಂಭೀರವಾಗಿ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ.

ಕೆಟ್ಟು ನಿಂತ ಲಾರಿಗೆ ಬೈಕ್ ಡಿಕ್ಕಿ..ಸವಾರ ಸ್ಥಳದಲ್ಲೇ ಸಾವು
ಕೆಟ್ಟು ನಿಂತ ಲಾರಿಗೆ ಬೈಕ್ ಡಿಕ್ಕಿ..ಸವಾರ ಸ್ಥಳದಲ್ಲೇ ಸಾವು
ಚಾಮರಾಜನಗರ ತಾಲೂಕಿನ ಕಾಳಿಹುಂಡಿ ಗ್ರಾಮದ ಬಸವರಾಜು (30) ಮೃತ ದುರ್ದೈವಿ. ಅಪಘಾತದಲ್ಲಿ ಮೃತರ ಅಕ್ಕ ಮಣಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಬಸವರಾಜೇಂದ್ರ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ ತಮ್ಮ ಅಕ್ಕನನ್ನು ಮನೆಗೆ ಕರೆತರುವಾಗ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಬಸವರಾಜು ಸಾವನ್ನಪ್ಪಿದ್ದಾರೆ. ಈ ಸಂಬಂಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.