ಕರ್ನಾಟಕ

karnataka

ETV Bharat / state

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಕ್ರೀಡಾ ಇಲಾಖೆ ನೌಕರ ಸ್ಥಳದಲ್ಲೇ ಸಾವು - Sports Dept employee died

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಾಮರಾಜನಗರದ ನೆಹರು ಮತ್ತು ಯುವಜನ ಕ್ರೀಡಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಸವಾಪುರದ ಬಸವಣ್ಣ ಮೃತ ನೌಕರ.

Chamrajnagar
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

By

Published : Feb 24, 2021, 11:16 AM IST

ಚಾಮರಾಜನಗರ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಸೋಮವಾರಪೇಟೆ ಬಳಿ ನಡೆದಿದೆ.

ಚಾಮರಾಜನಗರದ ನೆಹರು ಮತ್ತು ಯುವಜನ ಕ್ರೀಡಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಸವಾಪುರದ ಬಸವಣ್ಣ ಮೃತ ನೌಕರ. ತಮ್ಮ ಬೈಕ್​ನಲ್ಲಿ ಊರಿಗೆ ತೆರಳುತ್ತಿರುವಾಗ ಕಾಯಿಮಟ್ಟೆ ತುಂಬಿಕೊಂಡು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಚಾಮರಾಜನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details