ಕೊಳ್ಳೇಗಾಲ (ಚಾಮರಾಜನಗರ):ಅಪಘಾತ ಹಿನ್ನೆಲೆ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲದ ಧನಗೆರೆ ಗ್ರಾಮದ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು - ಚಾಮರಾಜನಗರ ಸುದ್ದಿ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಧನಗೆರೆ ಗ್ರಾಮದ ಬಳಿ ಅಪಘಾತ ಹಿನ್ನೆಲೆ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸತ್ತೇಗಾಲ ಶಿವಣ್ಣ(65 ) ಮೃತ ವ್ಯಕ್ತಿ. ಈತ ಚಾಮರಾಜನಗರಕ್ಕೆ ಕೆಲಸದ ನಿಮಿತ್ತ ತೆರಳಿದ್ದು, ಶುಕ್ರವಾರ ಸಂಜೆ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಧನಗೆರೆ ಗ್ರಾಮದ ಬಳಿ ಬೈಕ್ನಿಂದ ಕೆಳಗೆ ಬಿದ್ದಿದ್ದು, ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಶಂಕೆಯಿದೆ. ಬಳಿಕ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶಿವಣ್ಣನನ್ನ ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸುವ ವೇಳೆ ಸಾವನ್ನಪ್ಪಿದ್ದಾರೆ.
ಡಿವೈಎಸ್ಪಿ ನವೀನ್ ಕುಮಾರ್, ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀಕಾಂತ್, ಗ್ರಾಮಾಂತರ ಎಸ್ಐ ಅಶೋಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.