ಗುಂಡ್ಲುಪೇಟೆ: ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಘವಾಪುರ ಗೇಟ್ ಬಳಿ ಸಂಭವಿಸಿದೆ.
ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ: ಬೈಕ್ ಸವಾರ ಸಾವು - gundlupet accident news
ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆಯ ರಾಘವಾಪುರ ಗೇಟ್ ಬಳಿ ಸಂಭವಿಸಿದೆ.
ಬೈಕ್ ಸವಾರ ಸ್ಥಳದಲ್ಲೇ ಸಾವು
ತಾಲ್ಲೂಕಿನ ಕೋಟೆಕೆರೆ ಗ್ರಾಮದ ಮಣಿಕಂಠ ಮೃತ ದುರ್ದೈವಿಯಾಗಿದ್ದಾನೆ. ಈತ ಶುಕ್ರವಾರ ರಾತ್ರಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನೆರವೇರಿಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಈ ಸಂಬಂಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.