ಚಾಮರಾಜನಗರ/ಬೆಳಗಾವಿ/ಗದಗ:ದೋಸ್ತಿ ಸರ್ಕಾರ ವಿಶ್ವಾಸಮತದಲ್ಲಿ ಸೋಲಪ್ಪಿದ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಯಡಿಯೂರಪ್ಪ ಹಾಗೂ ಬಿಜೆಪಿ ಪರ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು. ಪಟಾಕಿ ಸಿಡಿಸಿ, ಬಿಜೆಪಿ ಬಾವುಟ ಹಾರಿಸಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು.
ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇತ್ತ ಬೆಳಗಾವಿಯಲ್ಲಿ ಕೂಡಾ ಸಮ್ಮಿಶ್ರ ಸರ್ಕಾರ ವಿಶ್ವಾಸಮತ ಕಳೆದುಕೊಂಡ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಸಂತಸ ಮನೆ ಮಾಡಿದೆ. ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಗದಗನಲ್ಲಿಯು ಸಹ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಗರದ ಹುಯಿಲಗೋಳ ನಾರಾಯಣರಾವ್ ವೃತ್ತ ಹಾಗೂ ಮುಳಗುಂದ ನಾಕಾದಲ್ಲಿ ಪರಸ್ಪರ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.