ಚಾಮರಾಜನಗರ:ಇಂದು ಪ್ರಕಟಗೊಂಡ ಉಪಚುನಾವಣೆಯಲ್ಲಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರಿಂದ ನಗರದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿದ ನಂತರ ರಸ್ತೆಯಲ್ಲಿದ್ದ ತ್ಯಾಜ್ಯವನ್ನೆಲ್ಲಾ ಕಾರ್ಯಕರ್ತರೇ ಸ್ವಚ್ಛಗೊಳಿಸಿದರು.
ಉಪಚುನಾವಣೆ ಫಲಿತಾಂಶ: ಪಟಾಕಿ ಸಿಡಿಸಿ ಸಂಭ್ರಮಿಸಿದ ಬಳಿಕ ಸ್ವಚ್ಛಗೊಳಿಸಿದ BJP ಕಾರ್ಯಕರ್ತರು - ಪಟಾಕಿ ಸಿಡಿಸಿ ಸಂಭ್ರಮಿಸಿದ ಬಳಿಕ ಸ್ವಚ್ಛಗೊಳಿಸಿದ ಬಿಜೆಪಿ ಕಾರ್ಯಕರ್ತರು
ಇಂದು ಪ್ರಕಟಗೊಂಡ ಉಪಚುನಾವಣೆಯಲ್ಲಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರಿಂದ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
bjp-won-followers-bjp-won-followers-celebrationcelebration
ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಘೋಷಣೆಗಳನ್ನು ಕೂಗುತ್ತಾ, ಪಚ್ಚಪ್ಪ ವೃತ್ತದಲ್ಲಿ ಜಮಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರ ಘೋಷಣೆಗಳನ್ನು ಕೂಗಿದರು. ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಕಳೆದ 4 ತಿಂಗಳಿಂದ ಯಡಿಯೂರಪ್ಪ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿರುವುದರಿಂದ ಸಿಕ್ಕಿರುವ ಜನಾದೇಶ ಇದಾಗಿದೆ. ಮತದಾರರು ಸ್ಪಷ್ಟ ಬಹುಮತ ನೀಡುವ ಮೂಲಕ ಸರ್ಕಾರವನ್ನು ಸುಭದ್ರ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಪ್ರೊ.ಮಲ್ಲಿಕಾರ್ಜುನಪ್ಪ ತಿಳಿಸಿದರು.