ಕರ್ನಾಟಕ

karnataka

ETV Bharat / state

ಚಾಮರಾಜನಗರದಲ್ಲೂ ಬ್ಲ್ಯಾಕ್ ಫಂಗಸ್ ಪತ್ತೆ: ಇಬ್ಬರು ಸೋಂಕಿತರು ಮೈಸೂರಿಗೆ ರವಾನೆ - ಬ್ಲ್ಯಾಕ್ ಫಂಗಸ್

ಚಾಮರಾಜನಗರದಲ್ಲಿ ಇದೇ ಮೊದಲ ಬಾರಿಗೆ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

black fungus
black fungus

By

Published : May 19, 2021, 5:55 PM IST

Updated : May 19, 2021, 7:49 PM IST

ಚಾಮರಾಜನಗರ: ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಬ್ಬರು ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.

ಚಾಮರಾಜನಗರ ತಾಲೂಕಿನ ಕಾಳನಹುಂಡಿ ಗ್ರಾಮದ 55 ವರ್ಷದ ಸೋಂಕಿತ ವ್ಯಕ್ತಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹಾಗೂ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ 60 ವರ್ಷದ ಸೋಂಕಿತ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ಲ್ಯಾಕ್ ಫಂಗಸ್ ಪತ್ತೆಯಾದ ಹಿನ್ನೆಲೆಯಲ್ಲಿ ಇಬ್ಬರನ್ನು ಮೈಸೂರಿಗೆ ರವಾನಿಸಲಾಗಿದೆ.

ಇನ್ನು, ಜಿಲ್ಲೆಯಲ್ಲಿ ಮರಣ ಪ್ರಮಾಣ ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಮೊದಲ ಬಾರಿಗೆ ಸೋಂಕಿತರಲ್ಲಿ ಕಪ್ಪು ಶೀಲಿಂಧ್ರ ಕಾಣಿಸಿಕೊಂಡಿರುವುದು ಆತಂಕ ಹುಟ್ಟಿಸಿದೆ.

Last Updated : May 19, 2021, 7:49 PM IST

ABOUT THE AUTHOR

...view details