ಚಾಮರಾಜನಗರ: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಸಂಸತ್ನಲ್ಲಿ ಚರ್ಚಿಸುತ್ತಿರುವ ಶಿವಸೇನೆ ಸಂಸದರ ಕ್ರಮವನ್ನು ವಿರೋಧಿಸಿ ಇಂದು ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಚಾಮರಾಜನಗರದಲ್ಲಿ ಕಟ್ಟಿಗೆ ಹಿಡಿದು ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಎದುರು ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಶಿವಸೇನೆ ಸಂಸದರು ಹಾಗೂ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ಅಲ್ಲಿಂದ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿಯ ಶ್ರೀಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ಕೆಲಕಾಲ ಹೆದ್ದಾರಿ ಸಂಚಾರ ತಡೆ ನಡೆಸಿದರು.
ಶಿವಸೇನೆ ಸಂಸದರ ವಿರುದ್ಧ ಪ್ರತಿಭಟನೆ ಸಂಸತ್ತಿನಲ್ಲಿ ಶಿವಸೇನೆಯ ಸಂಸದರು ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಚರ್ಚಿಸಿ ಕನ್ನಡಿಗರನ್ನು ಕೆಣಕಿದ್ದಾರೆ. ಶಿವಸೇನೆ ಮತ್ತು ಮಹಾರಾಷ್ಟ್ರ ಸರ್ಕಾರ ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಪದೇ ಪದೆ ಬೆಳಗಾವಿ ನಮಗೆ ಸೇರಬೇಕೆಂದು ಕ್ಯಾತೆ ತೆಗೆಯಲಾಗುತ್ತಿದೆ. ಬೆಳಗಾವಿ ಕರ್ನಾಟಕಕ್ಕೆ ಸೇರಿದ ಭಾಗವಾಗಿದೆ. ಶಿವಸೇನೆ ಸಂಸದರು ಇದನ್ನು ತಿಳಿದುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕನ್ನಡಿಗರು ನಿಮಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ..ಮದುವೆ ಖುಷಿಯಲ್ಲಿದ್ದ ಕುಟುಂಬದಲ್ಲಿ ವಿಧಿಯಾಟ.. ಅಪಘಾತದಲ್ಲಿ ಮದುಮಗಳ ತಾಯಿ ಸೇರಿ ನಾಲ್ವರ ಸಾವು!