ಕೊಳ್ಳೇಗಾಲ : ಜಾತ್ರಿ ಪ್ರಮಾಣ ಪತ್ರ ನೀಡದಿದ್ದಕ್ಕೆ ಪೋಷಕರು ತಮ್ಮ ಮಕ್ಕಳನ್ನೇ ಶಾಲೆಯಿಂದ ಹೊರಗುಳಿಸಿರುವ ಘಟನೆ ಹೊಂಡರಬಾಳು ಗ್ರಾಮದಲ್ಲಿ ಜರುಗಿದೆ.
ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಭೋವಿ ಜನಾಂಗ ಕೊಳ್ಳೇಗಾಲ ತಾಲೂಕಿನ ಹೊಂಡರಬಾಳು ಗ್ರಾಮದ ಬೋವಿ ಜನಾಂಗದ ಜನರು ನಾವು ಜಾತಿ ಪ್ರಮಾಣ ಪತ್ರಕ್ಕೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಅಧಿಕಾರಿಗಳಿಗೆ ಈ ಬಗ್ಗೆ ಅನೇಕ ಬಾರಿ ಪತ್ರ ಬರೆದು ಮನವಿ ಮಾಡಿದರೂ, ಎಷ್ಟು ಬಾರಿ ಕಚೇರಿಗೆ ಅಲೆದಾಡಿದರೂ ಪ್ರಯೋಜನಕ್ಕೆ ಬಂದಿಲ್ಲ. ವಡ್ಡ ಅಥವಾ ಬೋವಿ ಜಾತಿಯ ಪ್ರಮಾಣ ಪತ್ರ ನೀಡುವವರೆಗೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಭೋವಿ ಜನಾಂಗ ಬೇರೆ ಜಾತಿಯ ಪ್ರಮಾಣ ಪತ್ರ ನೀಡುತ್ತಾ ಇರೋದ್ರಿಂದ ಸರ್ಕಾರಿ ಸವಲತ್ತು ಸಿಗುತ್ತಿಲ್ಲ. ಹೀಗಾಗಿ, ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ನಾಗೇಶ್ ಮಾತನಾಡಿ, ಈ ಹಿಂದೆ ನಮಗೆ ಭೋವಿ ಜನಾಂಗ ಜಾತಿ ಪ್ರಮಾಣ ಪತ್ರ ಕೊಡುತ್ತಿದ್ದರು. ಆದರೆ, ಕಳೆದ ಎರಡು ವರ್ಷದ ಹಿಂದಿನಿಂದ ಭೋವಿ ಜನಾಂಗದ ಸರ್ಟಿಫಿಕೇಟ್ ನೀಡುತ್ತಿಲ್ಲ. ಇದರಿಂದ ನಮಗೆ ಬಹಳ ಸಮಸ್ಯೆಯಾಗಿದೆ.
ಸರ್ಕಾರಿ ಸವಲತ್ತು ಸಿಗುತ್ತಿಲ್ಲ. ನಮ್ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಭೋವಿ ಜನಾಂಗದ ಪ್ರಮಾಣ ಪತ್ರ ಕೊಡುವವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ. ಅಧಿಕಾರಿಗಳ ಕಚೇರಿಗೆ ತಿರುಗಿ ಸಾಕಾಗಿದೆ. ಯಾವೊಬ್ಬ ಅಧಿಕಾರಿಯೂ ನಮಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಓದಿ:ಬಿಜೆಪಿ ಕಚೇರಿಯಲ್ಲಿ ಸಿಎಂಗೆ ಮುಜುಗರ : ಕತ್ತಲಲ್ಲಿ ಭಾಷಣ ಮಾಡಿದ ಬಸವರಾಜ ಬೊಮ್ಮಾಯಿ