ಕರ್ನಾಟಕ

karnataka

ETV Bharat / state

ಮಾದಪ್ಪನ ದರ್ಶನ ಪಡೆದ ಬಿಎಸ್​ವೈ... ಗಡಿ ಜಿಲ್ಲೆಯಲ್ಲಿ ಪ್ರಚಾರ - undefined

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಚಾಮರಾಜನಗರದಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮೊದಲಿಗೆ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಮಲೆಮಹದೇಶ್ವರ ಬೆಟ್ಟಕ್ಕೆ ಸಿದ್ದರಾಮಯ್ಯ ಭೇಟಿ

By

Published : Apr 14, 2019, 11:57 AM IST

ಚಾಮರಾಜನಗರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಇಂದು ಜಿಲ್ಲಾ ಪ್ರವಾಸ ಕೈಗೊಂಡು ಭರ್ಜರಿ ಮತಬೇಟೆಗೆ ಇಳಿದಿದ್ದು, ಕ್ಷೇತ್ರ ವ್ಯಾಪ್ತಿಯ ನಾಲ್ಕು ಕಡೆ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಜ್ಯ ಉಸ್ತುವಾರಿ ಮುರುಳಿಧರ ರಾವ್ ಅವರೊಂದಿಗೆ ಜಿಲ್ಲಾ ಪ್ರವಾಸ ಕೈಗೊಂಡಿರುವ ಯಡಿಯೂರಪ್ಪ ಮೊದಲಿಗೆ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಮಯದ ಅಭಾವದಿಂದ ಹೆಲಿಕಾಪ್ಟರ್ ಮೊರೆ ಹೋಗಿರುವ ಬಿಎಸ್​ವೈ ಕೊಳ್ಳೇಗಾಲ, ಚಾಮರಾಜನಗರ ಹಾಗೂ ನಂಜನಗೂಡಿನಲ್ಲಿ ಬಹಿರಂಗ ಸಭೆ ನಡೆಸಲಿದ್ದಾರೆ.

ಚಾಮರಾಜನಗರದ ಸಭೆಯಲ್ಲಿ ಕಾಂಗ್ರೆಸ್​ನ ಹಲವು ಮುಖಂಡರು ಬಿಜೆಪಿಗೂ ಸೇರುವ ಸಾಧ್ಯತೆ ಇದ್ದು, ಮೈಸೂರಿನಲ್ಲಿ ವಿ.ಶ್ರೀನಿವಾಸ ಪ್ರಸಾದ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

For All Latest Updates

TAGGED:

ABOUT THE AUTHOR

...view details