ಚಾಮರಾಜನಗರ:ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆಯ ಎಪಿಎಂಸಿ ಮುಂಭಾಗ ನಡೆದಿದೆ.
ಬಸ್-ಬೈಕ್ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು - ಗುಂಡ್ಲುಪೇಟೆ ಪೊಲೀಸರು
ದೇಶಾದ್ಯಂತ ದಿನೇ ದಿನೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಚಾಮರಾಜನಗರದ ಗುಂಡ್ಲುಪೇಟೆ ಬಳಿಯ ಎಪಿಎಂಸಿ ಮುಂಭಾಗ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದೆ.
ಸಾರಿಗೆ ಬಸ್-ಬೈಕ್ ಮುಖಾಮುಖಿ: ಓರ್ವ ಸ್ಥಳದಲ್ಲೇ ಸಾವು
ಕೋಡಹಳ್ಳಿ ಗ್ರಾಮದ ಶಿವಮೂರ್ತಿ(42) ಮೃತಪಟ್ಟ ದುರ್ದೈವಿ. ಹಿಂಬದಿ ಸವಾರ ಬನ್ನಿತಾಳಪುರದ ಮಹೇಶ್(34) ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಇಬ್ಬರು ವೃತ್ತಿಯಲ್ಲಿ ಟ್ರ್ಯಾಕ್ಟರ್ ಚಾಲಕರಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ಬಸ್ ಮುಖಾಮುಖಿಯಾಗಿದೆ ಎನ್ನಲಾಗ್ತಿದೆ. ಸದ್ಯ ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.