ಕರ್ನಾಟಕ

karnataka

ETV Bharat / state

ಚಾಮರಾಜನಗರ: ಬಸ್ ಪಲ್ಟಿಯಾಗಿ 13 ಮಂದಿಗೆ ಗಾಯ - passengers injur

ಚಾಮರಾಜನಗರ ಹೊರವಲಯದ ನಂಜನಗೂಡು ರಸ್ತೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

KSRTC BUS flipover
ಕೆಎಸ್ಆರ್ ಟಿಸಿ ಬಸ್ ಪಲ್ಟಿ

By

Published : Nov 4, 2022, 2:42 PM IST

ಚಾಮರಾಜನಗರ:ಹೊರವಲಯದ ನಂಜನಗೂಡು ರಸ್ತೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ. ಮೈಸೂರಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಬಸ್ ನಿನ್ನೆ ಮಧ್ಯರಾತ್ರಿ‌ 2 ಗಂಟೆ ಸುಮಾರಿಗೆ ಹೊರವಲಯದಲ್ಲಿರುವ ಸಣ್ಣ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಕಂಡಕ್ಟರ್ ಸೇರಿದಂತೆ 13 ಮಂದಿ ಪ್ರಯಾಣಿಕರು ಗಾಯಾಕೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಚಾಮರಾಜನಗರ ಪಟ್ಟಣ ಠಾಣೆಯ ಕ್ಷಿಪ್ರ ಕಾರ್ಯ(QRT) ಪಡೆ ಹಾಗೂ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಗಾಯಗೊಂಡವರನ್ನು ಸ್ಸಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ‌.ಈ ಅಪಘಾತ ಚಾಮರಾಜನಗರ ಪಟ್ಟಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಮೆಟ್ರೋ ಪಿಲ್ಲರ್​ಗೆ ಡಿಕ್ಕಿಯಾದ ಕೆಎಸ್​ಆರ್​​ಟಿಸಿ ಬಸ್​​: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ABOUT THE AUTHOR

...view details