ಕರ್ನಾಟಕ

karnataka

ETV Bharat / state

ಸಿಲಿಕಾನ್ ಸಿಟಿಯಲ್ಲಿ ಗಾಂಜಾ ಹಾವಳಿ... ಓರ್ವ ಅಂದರ್, ಇನ್ನೋರ್ವ ಎಸ್ಕೇಪ್​

ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ದಾಳಿ ವೇಳೆ ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.

By

Published : Aug 16, 2019, 11:28 AM IST

ಸಿಲಿಕಾನ್ ಸಿಟಿಯಲ್ಲಿ ಗಾಂಜಾ ಗುಂಗು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗಾಂಜಾ ಮಾರಾತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಹಮ್ಮದ್ ಶರೀಫ್ ಬಂಧಿತ ಆರೋಪಿ. ಈತ ಕಲಾಸಿಪಾಳ್ಯ ಬಳಿ ಇರುವ ಮನೆಯಲ್ಲಿ ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರುತ್ತಿದ್ದ ಎನ್ನಲಾಗುತ್ತಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ತಂಡ, ಆರೋಪಿಯಿಂದ 1 ಕೆಜಿ ಗಾಂಜಾ, ಮೊಬೈಲ್ ಹಾಗೂ ಒಂದು ಬೈಕ್ ವಶಕ್ಕೆ ಪಡೆದಿದ್ದಾರೆ. ಇನ್ನು ದಾಳಿ ವೇಳೆ ಮತ್ತೋರ್ವ ಆರೋಪಿ ಇಜಾಜ್ ಪರಾರಿಯಾಗಿದ್ದಾನೆ.

ಈ ಕುರಿತು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿ ಅಹಮ್ಮದ್ ಶರೀಫ್​ನನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.

ABOUT THE AUTHOR

...view details