ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹನೂರು ಪಟ್ಟಣದಲ್ಲಿ ಸಂಭವಿಸಿದೆ.
ಕೊಳ್ಳೇಗಾಲ ಮೂಲಕ ಹನೂರಿಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹನೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀಪದ ಸ್ವಾಮಿಹಳ್ಳದ ಎಡಬದಿಯಲ್ಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರು ಅತಿ ವೇಗದಲ್ಲಿ ಬಂದಿದ್ದರಿಂದ ವಿದ್ಯುತ್ ಕಂಬ ತುಂಡಾಗಿ ಕೆಶಿಪ್ ರಸ್ತೆ ಕಾಮಗಾರಿಗಾಗಿ ಅಗೆಯಲಾಗಿದ್ದ ಗುಂಡಿಗೆ ಬಿದ್ದಿದೆ ಎಂದು ತಿಳಿದುಬಂದಿದೆ.