ಚಾಮರಾಜನಗರ:ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರದ ಬಳಿ ನಡೆದಿದೆ.
ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಕೇರಳದ ಸವಾರ ಸಾವು - ಕೇರಳದ ಸುಲ್ತಾನ್ ಬತ್ತೇರಿಯ ತುಷಾರ್
ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಸವಾಪುರದ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕಾರು-ಬೈಕ್ ಮುಖಾಮುಖಿ ಡಿಕ್ಕಿ
ಕೇರಳದ ಸುಲ್ತಾನ್ ಬತ್ತೇರಿಯ ತುಷಾರ್ (21) ಮೃತಪಟ್ಟವರು. ಇನ್ನು ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಕಾರಿನ ಹಿಂಬದಿ ಬರುತ್ತಿದ್ದ ಗುಂಡ್ಲುಪೇಟೆಯ ಮೊಫೆಡ್ ಸವಾರನೂ ಕೂಡ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಮೃತಪಟ್ಟ ತುಷಾರ್ ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದ್ದು, ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.