ಚಾಮರಾಜನಗರ:ಮತದಾರರು ಹಾಗೂ ಮುಖಂಡರಿಗೆ ಔತಣಕೂಟ ಏರ್ಪಡಿಸಿದ ಆರೋಪದ ಮೇಲೆ ಶಾಸಕ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮತದಾನಕ್ಕೂ ಮುನ್ನ ಔತಣಕೂಟ: ಗುಂಡ್ಲುಪೇಟೆ ಶಾಸಕ, ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ
ಔತಣಕೂಟ ಏರ್ಪಡಿಸಿದ ಆರೋಪದ ಮೇಲೆ ಶಾಸಕ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಾಗಿದೆ.
ಮತದಾನಕ್ಕೂ ಮುನ್ನ ಔತಣಕೂಟ: ಗುಂಡ್ಲುಪೇಟೆ ಶಾಸಕ, ಅಭ್ಯರ್ಥಿ ವಿರುದ್ಧ ಪ್ರಕರಣ
ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನಕುಮಾರ್, ಬಿಜೆಪಿ ಬೆಂಬಲಿತ ಅಭ್ಯರ್ಥಿ ಮೈ.ವಿ.ರವಿಶಂಕರ್ ಹಾಗೂ ಸಿದ್ದನಾಯಕ ಎಂಬವರ ಮೇಲೆ ಗುಂಡ್ಲುಪೇಟೆ ಠಾಣೆಯಲ್ಲಿ ಭಾನುವಾರ ಎಫ್ಐಆರ್ ದಾಖಲಾಗಿದೆ. ಚುನಾವಣಾ ಅಧಿಕಾರಿಯಾದ ಶ್ರೀಧರ್ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದ್ದು, ಭರ್ಜರಿ ಪಾರ್ಟಿ ನಡೆಸಲಾಗಿದೆ ಎನ್ನಲಾಗಿದೆ.
ಪಾರ್ಟಿ ನಡೆಸಿದ ಜಮೀನನ್ನು ಮಡಹಳ್ಳಿ ಗುಡ್ಡ ಕುಸಿದ ಪ್ರಕರಣದಲ್ಲಿ ಪರಾರಿಯಾಗಿರುವ ಹಕೀಬ್ ಗುತ್ತಿಗೆ ಪಡೆದುಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.
TAGGED:
ಮತದಾನಕ್ಕೂ ಮುನ್ನ ಔತಣಕೂಟ ಆರೋಪ