ಕರ್ನಾಟಕ

karnataka

ETV Bharat / state

ಮೀಸಲಾತಿ ಪಟ್ಟಿ ಪ್ರಕಟ: ಸಾಮಾನ್ಯ ಸದಸ್ಯರಿಗೆ ಚಾಮರಾಜನಗರ, ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಸ್ಥಾನ - ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಸ್ಥಾನ

ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ನಗರಸಭೆ ಹಾಗೂ ನಗರಸಭೆ ಅಧ್ಯಕ್ಷ ಸ್ಥಾನದ ಬಗ್ಗೆ ರಾಜ್ಯ ಸರ್ಕಾರ ಹೊಸ ಮೀಸಲಾತಿ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

Kolegala Municipality president Reservation List
ಸಾಮಾನ್ಯ ಸದಸ್ಯರಿಗೆ ಚಾಮರಾಜನಗರ, ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಸ್ಥಾನ

By

Published : Mar 11, 2020, 10:03 PM IST

ಚಾಮರಾಜನಗರ: ಚುನಾವಣೆ ನಡೆದು ತಿಂಗಳುಗಟ್ಟಲೆ ಸಮಯದ ಬಳಿಕ ಮೀಸಲಾತಿ ಪಟ್ಟಿ ತಕರಾರು ಮುಗಿದಿದ್ದು, ಕೊನೆಗೂ ರಾಜ್ಯ ಸರ್ಕಾರ ಹೊಸ ಮೀಸಲಾತಿ ಪಟ್ಟಿ ಹೊರಡಿಸಿದೆ‌.

ಚಾಮರಾಜನಗರ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಸದಸ್ಯರಿಗಾಗಿದ್ದು, ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ (ಬಿ) ಮಹಿಳೆಗೆ ಆಗಿದೆ‌. ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆಯಾಗಬೇಕಿದೆ‌.

ಇನ್ನು, ಯಳಂದೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ (ಎ) ಮಹಿಳೆಗೆ, ಹನೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ (ಬಿ) ಕ್ಕಾಗಿದೆ.

ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ (ಬಿ), ಉಪಾಧ್ಯಕ್ಷ ಪಟ್ಟ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ‌. ಹೊಸ ಮೀಸಲಾತಿ ಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಅಧ್ಯಕ್ಷ ಗಾದಿಗಾಗಿ ರಾಜಕಾರಣ ಗರಿಗೆದರಿದೆ‌.

ABOUT THE AUTHOR

...view details