ಚಾಮರಾಜನಗರದಲ್ಲಿ ಕೊರೊನಾ ಸೋಂಕಿತ ಎಎಸ್ಐ ಸಾವು - Corona in Chamarajanagar
ಚಾಮರಾಜನಗರ ಗ್ರಾಮಾಂತರ ಠಾಣೆಯ ಎಎಸ್ಐ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಎಎಸ್ಐ ಸಾವು
ಚಾಮರಾಜನಗರ: ಇಲ್ಲಿನ ಗ್ರಾಮಾಂತರ ಠಾಣೆಯ ಎಎಸ್ಐ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಮೃತರು ಗುಂಡ್ಲುಪೇಟೆ ತಾಲೂಕಿನ ಕುಣಗಳ್ಳಿ ಮೂಲದವರು ಎಂದು ತಿಳಿದುಬಂದಿದೆ. ಕಳೆದ ಜುಲೈ 30ರಂದು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು.
ಇನ್ನು ಮೃತರಿಗೆ ಮಧುಮೇಹ ಹಾಗೂ ಬಿಪಿ ಜೊತೆಗೆ ಟೈಫಾಯ್ಡ್ ಜ್ವರವೂ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಮೃತರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಸ್ವಯಂ ಸೇವಕರು ಗೌರವಯುತವಾಗಿ ನಡೆಸಿದ್ದಾರೆ.