ಚಾಮರಾಜನಗರ:ಡಿ.ಕೆ. ಶಿವಕುಮಾರ್ ಬಂಧನಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಜನರ ಹಾದಿ ತಪ್ಪಿಸುತ್ತಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ. ಮಲ್ಲಿಕಾರ್ಜುನಪ್ಪ ವಾಗ್ದಾಳಿ ನಡೆಸಿದರು.
ಡಿಕೆಶಿ ಬಂಧನಕ್ಕೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಚಾಮರಾಜನಗರ ಬಿಜೆಪಿ ಜಿಲ್ಲಾಧ್ಯಕ್ಷ - ಕಾಂಗ್ರೆಸ್, ಜೆಡಿಎಸ್ ಜನರ ಹಾದಿ ತಪ್ಪಿಸುತ್ತಿವೆ
ಡಿ.ಕೆ.ಶಿವಕುಮಾರ್ ಬಂಧನಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ, ಕಾಂಗ್ರೆಸ್ ಮತ್ತು ಜೆಡಿಎಸ್ ಜನರ ಹಾದಿ ತಪ್ಪಿಸುತ್ತಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ. ಮಲ್ಲಿಕಾರ್ಜುನಪ್ಪ ಕಿಡಿಕಾರಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆಯಿಂದ ಯಾವುದೇ ಪ್ರಯೋಜನವಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಕೂಡ ರಾಜ್ಯವನ್ನು ಭಯದ ವಾತಾವರಣದಲ್ಲಿಡಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.
ಸಿಬಿಐ ಮತ್ತು ಇಡಿ ಪ್ರತ್ಯೇಕ ತನಿಖಾ ಸಂಸ್ಥೆಗಳಾಗಿದ್ದು, ಇಡಿ ಅಧಿಕಾರಿಗಳಿಗೆ ಸಮರ್ಪಕ ಉತ್ತರ ನೀಡದಿರುವುದು, ಸಿಕ್ಕಿರುವ ಹಣಕ್ಕೆ ದಾಖಲಾತಿ ನೀಡದಿರುವುದು, ವಿಚಾರಣೆಗೆ ಹಾಜರಾದರೂ ತಾಳೆಯಾಗದ ರೀತಿ ಮಾತನಾಡುತ್ತಿರುವುದು ಡಿ.ಕೆ.ಶಿವಕುಮಾರ್ ಅವರ ಬಂಧನಕ್ಕೆ ಕಾರಣವಾಗಿದೆ ಎಂದು ಪ್ರೊ. ಮಲ್ಲಿಕಾರ್ಜುನಪ್ಪ ಅಭಿಪ್ರಾಯಪಟ್ಟರು.