ಚಾಮರಾಜನಗರ: ಇಂದು ಜಿಲ್ಲೆಯಲ್ಲಿ ಹೊಸದಾಗಿ 38 ಕೋವಿಡ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 2725ಕ್ಕೆ ಏರಿಕೆಯಾಗಿದೆ. ಇಬ್ಬರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. 34 ಮಂದಿ ಗುಣಮುಖರಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 518 ರಷ್ಟಿದೆ.
ಚಾಮರಾಜನಗರದಲ್ಲಿ ಹೊಸ ಸೋಂಕಿತರು 38, ಗುಣಮುಖರ ಸಂಖ್ಯೆ 34 - Chamarajanagar covid update
ಚಾಮರಾಜನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮತ್ತು ಗುಣಮುಖ ಹೊಂದುತ್ತಿರುವವರ ಸಂಖ್ಯೆ ಸಮಬಲದಲ್ಲಿವೆ. ಇಂದು 38 ಕೋವಿಡ್ ಕೇಸ್ ಪತ್ತೆಯಾದರೆ 34 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
21 ಮಂದಿ ಐಸಿಯುನಲ್ಲಿದ್ದು 172 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 391 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಯಳಂದೂರು ತಾಲೂಕಿನ ಗಂಗವಾಡಿಯ 54 ವರ್ಷದ ವ್ಯಕ್ತಿ ಇತ್ತೀಚೆಗೆ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಇನ್ನು ಚಾಮರಾಜನಗರ ತಾಲೂಕಿನ ಹೆಗ್ಗವಾಡಿಪುರದ 60 ವರ್ಷದ ವ್ಯಕ್ತಿಯೊಬ್ಬರು 6 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಸಹ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ಸ್ವಯಂ ಸೇವಕರು ಗೌರವಯುತವಾಗಿ ನೆರವೇರಿಸಿದ್ದಾರೆ.