ಕರ್ನಾಟಕ

karnataka

ETV Bharat / state

ಚಾಮರಾಜನಗರದಲ್ಲಿ ಎರಡನೇ ಹಂತದ ಕೋವಿಡ್ ಲಸಿಕೆ ಅಭಿಯಾನ ಆರಂಭ - ಚಾಮರಾಜನಗರ ಕೋವಿಡ್ ಲಸಿಕೆ

ಕಂದಾಯ, ಪೊಲೀಸ್, ಹೋಂ ಗಾರ್ಡ್ಸ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆ, ನಗರಾಭಿವೃದ್ದಿ ಇಲಾಖೆ (ನಗರಸಭೆ, ಪುರಸಭೆ ಪಟ್ಟಣ ಪಂಚಾಯಿತಿ) ಸಿಬ್ಬಂದಿಯನ್ನು ಫ್ರಂಟ್ ಲೈನ್ ವಾರಿಯರ್​ಗಳೆಂದು ಗುರುತಿಸಲಾಗಿದ್ದು, ಈಗಾಗಲೇ 3,802 ಮಂದಿ ಲಸಿಕೆಗಾಗಿ ಹೆಸರು ನೋಂದಾಯಿಸಿದ್ದಾರೆ.

covid vaccine
covid vaccine

By

Published : Feb 9, 2021, 6:33 AM IST

ಚಾಮರಾಜನಗರ:ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕರ್ತರ ಬಳಿಕ ಫ್ರಂಟ್ ಲೈನ್ ವಾರಿಯರ್ಸ್‍ಗೆ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಸೋಮವಾರದಿಂದ ಆರಂಭವಾಗಿದೆ.

ಕಂದಾಯ, ಪೊಲೀಸ್, ಹೋಂ ಗಾರ್ಡ್ಸ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆ, ನಗರಾಭಿವೃದ್ದಿ ಇಲಾಖೆ (ನಗರಸಭೆ, ಪುರಸಭೆ ಪಟ್ಟಣ ಪಂಚಾಯತ್​) ಸಿಬ್ಬಂದಿಯನ್ನು ಫ್ರಂಟ್ ಲೈನ್ ವಾರಿಯರ್​ಗಳೆಂದು ಗುರುತಿಸಲಾಗಿದ್ದು, ಈಗಾಗಲೇ 3,802 ಮಂದಿ ಲಸಿಕೆಗಾಗಿ ಹೆಸರು ನೋಂದಾಯಿಸಿದ್ದಾರೆ.

ಡಿಸಿ ಡಾ. ಎಂ.ಆರ್. ರವಿ ಅವರು ಕೋವಿಡ್ ಲಸಿಕೆ ಪಡೆದುಕೊಂಡರು

ಕಂದಾಯ ಇಲಾಖೆಯಲ್ಲಿ 581, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 1649, ಪೊಲೀಸ್ ಹೋಂಗಾರ್ಡ್ಸ್ ಇಲಾಖೆಯಲ್ಲಿ 1461, ನಗರಾಭಿವೃದ್ದಿ ಇಲಾಖೆಯಲ್ಲಿ 111 ಅಧಿಕಾರಿ ಸಿಬ್ಬಂದಿ ಲಸಿಕೆಗಾಗಿ ಹೆಸರು ನೊಂದಾಯಿಸಿದ್ದಾರೆ. ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ನಿನ್ನೆ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ಪಡೆದುಕೊಂಡರು.

ಇದನ್ನೂ ಓದಿ: ಬೀದರ್​, ಮಂಡ್ಯ, ಕೋಲಾರದಲ್ಲಿ ಕೊರೊನಾ ಲಸಿಕೆ ಪಡೆದ ಜಿಲ್ಲಾಧಿಕಾರಿಗಳು

ನಿನ್ನೆ ಬೆಳಗ್ಗೆ ಒಟ್ಟು 177 ಮಂದಿ ಲಸಿಕೆ ಪಡೆದುಕೊಂಡಿದ್ದು ನಗರದ ಜಿಲ್ಲಾ ಆಸ್ಪತ್ರೆ, ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ಪಟ್ಟಣದ ಸರ್ಕಾರಿ ಆಸ್ಪತ್ರೆ, ಬೇಗೂರು, ಸಂತೇಮರಹಳ್ಳಿ ಸಮುದಾಯ ಆರೋಗ್ಯ ಕೇಂದ್ರ, ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗುತ್ತಿದೆ.

ABOUT THE AUTHOR

...view details