ಚಾಮರಾಜನಗರ:ಕೇರಳದಿಂದ ರಾಜ್ಯ ಪ್ರವೇಶಕ್ಕೆ RT-PCR ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಒಂದು ಡೋಸ್ ಲಸಿಕೆ ಪಡೆದಿದ್ದರೂ ರಾಜ್ಯ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಕೇರಳದಲ್ಲಿ ಕೊರೊನಾ ಪ್ರಕರಗಳು ಹೆಚ್ಚಳವಾಗುತ್ತಿರುವುದರಿಂದ ಎರಡು ಡೋಸ್ ಲಸಿಕೆ ಪಡೆದಿದ್ದರೂ 72 ಗಂಟೆ ಒಳಗಿನ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮೂಲೆಹೊಳೆ, ಕೆಕ್ಕನಹಳ್ಳ ಚೆಕ್ ಪೋಸ್ಟ್ಗಳಿಗೆ ಭೇಟಿ ನೀಡಿ ಸಿಬ್ಬಂದಿಗೆ ಸೂಚಿಸಿದ್ದಾರೆ.
ಸರಕು ಸಾಗಣೆ ವಾಹನ ಚಾಲಕರು ಪ್ರತಿ 15 ದಿನಕ್ಕೊಮ್ಕೆ RT-PCR ಟೆಸ್ಟ್ ಮಾಡಿಸಿಕೊಳ್ಳಬೇಕಿದೆ. ಇದರೊಟ್ಟಿಗೆ ಬಂಡೀಪುರ ಸಫಾರಿಗೆ ತೆರಳುವವರಿಗೂ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.