ಚಾಮರಾಜನಗರ:ಇಲ್ಲಿನಜಿಲ್ಲಾಸ್ಪತ್ರೆ ಸಿಬ್ಬಂದಿ ರೋಗಿಗಳ ಬಳಸುವ ದಿಂಬಿನಲ್ಲಿ ಆಟವಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿ ದಿಂಬಿನಾಟ...ವಿಡಿಯೋ ವೈರಲ್ - ಚಾಮರಾಜನಗರ ಸುದ್ದಿ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಾಲ್ವರು ಸಿಬ್ಬಂದಿ, ಹರಟೆ ಹೊಡೆಯುತ್ತಾ ದಿಂಬಿನಾಟ ಆಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಿಬ್ಬಂದಿ ಕಾರ್ಯ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಾಲ್ವರು ಸಿಬ್ಬಂದಿ, ಹರಟೆ ಹೊಡೆಯುತ್ತಾ ದಿಂಬು ಎಸೆದು ಆಡುತ್ತಿರುವುದನ್ನು ಸಿಬ್ಬಂದಿಯೊಬ್ಬರು ಸೆರೆಹಿಡಿದಿದ್ದಾರೆ. ಗ್ರಾಮೀಣ ಭಾಗದ ಬಡವರೇ ಆಶ್ರಯಿಸಿರುವ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿ ಕಾರ್ಯ ವೈಖರಿ ಹಾಗೂ ಅಶಿಸ್ತಿನ ನಡವಳಿಕೆಗೆ ಸಾರ್ವಜನಿಕರು ಕಿಡಿಕಾರಿದ್ದಾರೆ. ಕೆಲವರು ಆಸ್ಪತ್ರೆಯಲ್ಲಿ ದೊಂಬರಾಟ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಶೇರ್ ಮಾಡುತ್ತಿದ್ದಾರೆ.
ಈ ಸಿಬ್ಬಂದಿ ಆಸ್ಪತ್ರೆಯ ಕೆಲಸದ ವೇಳೆಯಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದರೆ ಅಥವಾ ವಿರಾಮದ ವೇಳೆ ದಿಂಬಿನಾಟ ಆಡುತ್ತಿದ್ದರೆ ಎಂಬುದದು ಪರಿಶೀಲನೆ ಬಳಿಕವೇ ತಿಳಿಯಬೇಕಿದೆ.