ಚಾಮರಾಜನಗರ:ಗುಂಡ್ಲುಪೇಟೆ-ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಬದಿ ನಿಂತಿದ್ದ ಆನೆಯೊಂದು ಬೈಕ್ ಸವಾರನನ್ನು ಓಡಿಸಿಕೊಂಡು ಹೋಗಿದ್ದು, ವ್ಯಕ್ತಿ ಎದ್ನೋ ಬಿದ್ನೋ ಎಂದು ಓಡಿ ಹೋಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.
ಕೆಲ ದಿನಗಳ ಹಿಂದೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ಚೆಕ್ ಪೋಸ್ಟ್ ಸಮೀಪ ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಆನೆಯನ್ನು ಗಮನಿಸಿಯೂ ಬೈಕ್ ಸವಾರ ತೆರಳಲು ಮುಂದಾಗಿದ್ದನು. ಈ ವೇಳೆ ಆನೆ ದಾಳಿ ಮಾಡಲು ಮುಂದಾಗಿದೆ. ಆಗ ಸವಾರ ಬೈಕ್ ಬಿಟ್ಟು ಓಡಿ ಹೋಗಿದ್ದಾನೆ. ಇದು ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಕಷ್ಟು ವೈರಲ್ ಆಗ್ತಿದೆ.