ಚಾಮರಾಜನಗರ: ಮಹಾಮಾರಿ ಕೊರೊನಾಗೆ ಹೆದ್ದಾರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಬಲಿಯಾಗಿರುವ ಘಟನೆ ನಡೆದಿದೆ.
ಕೊರೊನಾಗೆ ಚಾಮರಾಜನಗರದ ಪೊಲೀಸ್ ಸಿಬ್ಬಂದಿ ಬಲಿ - ಪೊಲೀಸ್ಗೆ ಕೊರೊನಾ ಸೋಂಕು ಸುದ್ದಿ
ಹೈವೇ ಪ್ಯಾಟ್ರೊಲಿಂಗ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಮರಾಜನಗರದ ಪೊಲೀಸ್ ಸಿಬ್ಬಂದಿವೋರ್ವರು ಸಾವನ್ನಪ್ಪಿದ್ದಾರೆ.
ಪೊಲೀಸ್ ಸಿಬ್ಬಂದಿ ಬಲಿ
ಹನೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊಳ್ಳೇಗಾಲದ ಪಾಳ್ಯ ಗ್ರಾಮದ 36 ವರ್ಷದ ಪೊಲೀಸ್ ಮೃತರು. ಕಳೆದ ಸೆಪ್ಟೆಂಬರ್ 30ರಂದು ಇವರಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕೆಲ ತಿಂಗಳುಗಳ ಹಿಂದೆಯಷ್ಟೇ ಚಾಮರಾಜನಗರ ಗ್ರಾಮಾಂತರ ಠಾಣೆಯ ಎಎಸ್ಐ ಹಾಗೂ ಗುಂಡ್ಲುಪೇಟೆಯ ಹೆಡ್ ಕಾನ್ಸ್ಟೇಬಲ್ ಕೊರೊನಾ ಸೋಂಕು ಕಾಣಿಸಿಕೊಂಡು ಅಸುನೀಗಿದ್ದರು.