ಚಾಮರಾಜನಗರ:ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 107ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ತ್ಯಾಜ್ಯದಿಂದ ಕರಕುಶಲ ವಸ್ತುಗಳನ್ನು ತಯಾರಿಸುವ ಕರ್ನಾಟಕದ ಗಡಿಜಿಲ್ಲೆ ಚಾಮರಾಜನಗರದ ಮಹಿಳೆಯ ಕಾರ್ಯವನ್ನು ಹೊಗಳಿದರು.
ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದ ವರ್ಷಾ ಎಂಬವರ ಕರಕುಶಲ ಕಲೆಯ ಬಗ್ಗೆ ಪ್ರಸ್ತಾಪಿಸಿದ ಮೋದಿ ವೋಕಲ್ ಫಾರ್ ಲೋಕಲ್ (ಸ್ಥಳೀಯ ಉತ್ಪನ್ನಗಳಿಗೆ ನಾವು ದನಿಯಾಗಬೇಕು) ಮಹತ್ವ ಸಾರಿದರು.
ಮನ್ ಕಿ ಬಾತ್ನಿಂದ ಪ್ರೇರೇಪಣೆಗೊಂಡಿರುವ ವರ್ಷಾ, ಬಾಳೆ ಗಿಡದ ನಾರಿನಿಂದ ಕರಕುಶಲ ವಸ್ತುಗಳನ್ನು ತಯಾರಿಸುವ ಉದ್ಯಮ ನಡೆಸುತ್ತಿದ್ದಾರೆ. ಬಾಳೆ ದಿಂಡಿನಿಂದ ಉಪ್ಪಿನಕಾಯಿ, ಚಟ್ನಿಪುಡಿ ಸೇರಿದಂತೆ ವಿವಿಧ ತಿನಿಸು ತಯಾರಿಸುವುದರೊಂದಿಗೆ ಐವರು ಮಹಿಳೆಯರು, ಇಬ್ಬರು ಪುರುಷರಿಗೆ ನೌಕರಿ ಕೊಟ್ಟಿದ್ದಾರೆ. ವೋಕಲ್ ಫಾರ್ ಲೋಕಲ್ನಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಮೋದಿ ತಮ್ಮ ರೇಡಿಯೋ ಭಾಷಣದಲ್ಲಿ ಹೇಳಿದರು.