ಚಾಮರಾಜನಗರ: ಕಾಡಾನೆ ದಾಳಿಗೆ ಕ್ಷೌರಿಕ ಬಲಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕೋಳಿಪಾಳ್ಯ ಗ್ರಾಮದ ಸುರೇಶ್(38) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬೂದಿಪಡಗದಲ್ಲಿ ಸಲೂನ್ ನಲ್ಲಿ ಕೆಲಸ ಮುಗಿಸಿಕೊಂಡು ಪಡಿತರ ಪಡೆದು ಮನೆಗೆ ಹಿಂತಿರುಗುವಾಗ ಕಾಡಾನೆ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
ಚಾಮರಾಜನಗರ: ಕಾಡಾನೆ ದಾಳಿಗೆ ಕ್ಷೌರಿಕ ಸಾವು - elephant attack,one died in chamarajanagara
ಕಾಡಾನೆ ದಾಳಿಗೆ ಕ್ಷೌರಿಕ ಬಲಿಯಾಗಿರುವ ಘಟನೆ ಚಾಮರಾಜನಗರದ ಮೂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೋಳಿಪಾಳ್ಯ ನಿವಾಸಿ ಸುರೇಶ್ ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಚಾಮರಾಜನಗರ: ಕಾಡಾನೆ ದಾಳಿಗೆ ಕ್ಷೌರಿಕ ಸಾವು
ಈ ಘಟನೆ ರಾಷ್ಟ್ರೀಯ ಹೆದ್ದಾರಿ ಕೂಗಳತೆ ದೂರದಲ್ಲಿ ನಡೆದಿದ್ದು ಸ್ಥಳಕ್ಕೆ ಪುಣಜನೂರು ವಲಯ ಅರಣ್ಯಾಧಿಕಾರಿಗಳು ಮತ್ತು ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಭೇಟಿ ಕೊಟ್ಟು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಓದಿ :ದೊಡ್ಡಬಳ್ಳಾಪುರ: ಮಾಂಗಲ್ಯ ಸರ ಕದ್ದು ಮಣ್ಣಿನಲ್ಲಿ ಬಚ್ಚಿಟ್ಟಿದ್ದ ಚಾಲಾಕಿ ಬಂಧನ