ಚಾಮರಾಜನಗರ:ಟಫ್ ಲಾಕ್ಡೌನ್ ನಡುವೆಯೂ ಕೊರೊನಾ ಸಂಖ್ಯೆ ಹೆಚ್ಚಿದ್ದು, 622 ಹೊಸ ಕೇಸ್ಗಳು ಪತ್ತೆಯಾಗಿದ್ದು, 575 ಮಂದಿ ಮಹಾಮಾರಿಯಿಂದ ಗುಣಮುಖರಾಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 4,553 ಆಗಿದ್ದು, 50 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2,311 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 7,464 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.