ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ 24 ವ್ಯಕ್ತಿಗಳ ಕುಟುಂಬಸ್ಥರಿಗೆ ತಲಾ ಎರಡು ಲಕ್ಷದಂತೆ 48 ಲಕ್ಷ ರೂ. ಬಿಡುಗಡೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಚಾಮರಾಜನಗರ ಜಿಲ್ಲಾಧಿಕಾರಿಗಳಿಗೆ 48 ಲಕ್ಷ ರೂ. ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ. ಹೈಕೋರ್ಟ್ನಲ್ಲಿ ಸರ್ಕಾರ ಚಾಮರಾಜನಗರದಲ್ಲಿನ ಘಟನೆಯಲ್ಲಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಿ ನಿರ್ದೇಶನ ನೀಡಿತ್ತು.