ಕರ್ನಾಟಕ

karnataka

By

Published : Mar 23, 2020, 8:13 PM IST

ETV Bharat / state

ಮಧ್ಯರಾತ್ರಿಯಿಂದ ಚಾಮರಾಜನಗರ ಜಿಲ್ಲೆಯಲ್ಲಿ 144 ಸೆಕ್ಷನ್​: ಅಗತ್ಯ ವಸ್ತುಗಳಿಗಿಲ್ಲ ತೊಂದರೆ

ಮಹಾಮಾರಿ ಸೋಂಕು ಹರಡುವಿಕೆ ತಡೆಯುವ ದೃಷ್ಟಿಯಿಂದಾಗಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇಂದು ರಾತ್ರಿಯಿಂದಲೇ ಜಿಲ್ಲೆಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್​.ರವಿ ಆದೇಶ ಹೊರಡಿಸಿದ್ದಾರೆ.

chamarajangar-district-lock-down-from-tonight
ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ

ಚಾಮರಾಜನಗರ: ಕೊರೊನಾ ಸೋಂಕು ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮಧ್ಯರಾತ್ರಿಯಿಂದ ಮಾ. 28ರವರೆಗೆ ಚಾಮರಾಜನಗರ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಆದೇಶಿಸಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯುಗಾದಿ ಹಬ್ಬದ ಸಡಗರದಲ್ಲಿ ಸಾಮಾಜಿಕ ಅಂತರದ ಬಗ್ಗೆ ಜನರು ಅಸಡ್ಡೆ ತೋರುವುದರಿಂದ ಅನಿವಾರ್ಯವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗಡಿಯಲ್ಲಿ ಅಗತ್ಯ ವಸ್ತುಗಳ ವಾಹನ ಹೊರತುಪಡಿಸಿ ಎಲ್ಲಾ ಖಾಸಗಿ ವಾಹನಗಳು ಜಿಲ್ಲೆ ಪ್ರವೇಶಿಸುವುದನ್ನು ಬಂದ್ ಮಾಡಲಾಗಿದೆ ಎಂದು ತಿಳಿಸಿದರು.

ಚಾಮರಾಜನಗರದಲ್ಲಿ 144 ಸೆಕ್ಷನ್​​

ಅಂತರ್​ ರಾಜ್ಯ, ಅಂತರ್​ ಜಿಲ್ಲೆ ಹಾಗೂ ಜಿಲ್ಲೆಯ ಒಳಗೆ ಸಂಚರಿಸುವ ಎಲ್ಲಾ ಖಾಸಗಿ ಬಸ್​ಗಳಿಗೂ ನಿರ್ಬಂಧವಿದೆ. ಹೋಟೆಲ್​ಗಳಲ್ಲಿ ಪಾರ್ಸಲ್​ಗೆ ಮಾತ್ರ ಅವಕಾಶವಿದೆ‌. ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಇನ್ನು, ಇದೇ ವೇಳೆ ಸರ್ಕಾರಿ ಕಚೇರಿಗಳಲ್ಲಿ ಸಿ ಮತ್ತು ಡಿ ವರ್ಗದ ಮಹಿಳೆಯರು, 50 ವರ್ಷ ಮೇಲ್ಪಟ್ಟ ಎಲ್ಲರಿಗೂ ವೇತನ ಸಹಿತ ರಜೆ ನೀಡಲಿದ್ದು, ಅವರು ಕಚೇರಿಗೆ ಬರುವ ಅವಶ್ಯಕತೆ ಇಲ್ಲ ಎಂದರು. ಸಾರ್ವಜನಿಕರ ಅಗತ್ಯ ವಸ್ತುಗಳು, ತುರ್ತು ಸೇವೆಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ABOUT THE AUTHOR

...view details