ಚಾಮರಾಜನಗರ:ಜಿಲ್ಲೆಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಎಂ.ಚಿನ್ನಸ್ವಾಮಿ ಇಂದು ಕಾಂಗ್ರೆಸ್ಗೆ ಕೈ ಕೊಟ್ಟು ಕಮಲ ಮುಡಿದಿದ್ದಾರೆ.
ಚಾಮರಾಜನಗರದಲ್ಲಿ ಪಕ್ಷಾಂತರ ಪರ್ವ: ಕಾಂಗ್ರೆಸ್ಗೆ ಗುಡ್ ಬೈ ಹೇಳಿದ ಸಿದ್ದು ಆಪ್ತ
ಲೋಕಸಭೆ ಚುನಾವಣೆ ಹಿನ್ನೆಲೆ ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರೊಬ್ಬರು ಇಂದು ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದಾರೆ.
ಕಾಂಗ್ರೆಸ್ಗೆ ಗುಡ್ ಬೈ ಹೇಳಿದ ಸಿದ್ದುಆಪ್ತ
ಕುರುಬ ಸಮುದಾಯದ ಚಿನ್ನಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತರಾಗಿದ್ದು ಕಳೆದ ಸರ್ಕಾರದಲ್ಲಿ ಕನಿಷ್ಠ ವೇತನಾ ಸಲಹಾ ಮಂಡಳಿಯ ಅಧ್ಯಕ್ಷರೂ ಆಗಿದ್ದರು.
ಬದಲಾದ ರಾಜಕೀಯ ಸನ್ನಿವೇಶದಲ್ಲಿ ಇಂದು ವಿ.ಶ್ರೀನಿವಾಸಪ್ರಸಾದ್ ಸಮ್ಮುಖದಲ್ಲಿ ಬಿಜೆಪಿ ಸೇರಿ, ಪಕ್ಷ ಸಂಘಟನೆಯಲ್ಲಿ ತೊಡಗುವುದಾಗಿ ಚಿನ್ನಸ್ವಾಮಿ ಘೋಷಿಸಿದ್ದಾರೆ.