ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 12ರಂದು ಚಾಮರಾಜನಗರ ನಗರಕ್ಕೆ ಭೇಟಿ ನೀಡಲಿದ್ದು ಈ ಸಂಬಂಧ ಸಿಎಂ ಅವರ ವಿಶೇಷ ಕರ್ತವ್ಯಾಧಿಕಾರಿಯಿಂದ ಜಿಲ್ಲಾಧಿಕಾರಿಗೆ ಪತ್ರ ಬಂದಿದೆ.
ಬೆಳಗ್ಗೆ 10.30ಕ್ಕೆ ಚಾಮರಾಜನಗರಕ್ಕೆ ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 1ಕ್ಕೆ ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಿ, ನಂತರ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆಯಲಿದ್ದಾರೆ.