ಚಾಮರಾಜನಗರ : ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರವು ಶ್ರೀ ಕ್ಷೇತ್ರ ಸುತ್ತಮುತ್ತಲಿನ 15 ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ದತ್ತು ತೆಗೆದುಕೊಳ್ಳಲಿದೆ. ಹಣಕ್ಕೆ ಎಷ್ಟೇ ಕಷ್ಟವಾದ್ರೂ ಸರಿಯೇ ಶ್ರೀಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.
ಶಂಕು ಸ್ಥಾಪನೆಯಾಗುತ್ತಿರುವ ಕಾಮಗಾರಿಗಳಿಗೆ ಟೆಂಡರ್ ಆಗಿಲ್ಲದಿರುವ ಕುರಿತು ಪ್ರತಿಕ್ರಿಯಿಸಿ, ಕೂಡಲೇ ಆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು, ಯಾವುದೇ ಸಮಸ್ಯೆ ಇಲ್ಲ ಎಂದರು. ಇದೇ ವೇಳೆ, ಚಾಮರಾಜನಗರಕ್ಕೆ ಯಾವಾಗ ಬೇಕಾದರೂ ಬರುತ್ತೇನೆ ಎಂದು ಉತ್ತರಿಸಿದರು.