ಚಾಮರಾಜನಗರ: ಜಿಲ್ಲಾ ಕೇಂದ್ರಕ್ಕೆ ಬಂದರೇ ಸಿಎಂ ಅಧಿಕಾರ ಕಳೆದುಕೊಳ್ಳಲಿದ್ದಾರೆಂಬ ಮೌಢ್ಯಕ್ಕೆ ಕಟ್ಟುಬಿದ್ದು ಮಲೆಮಹದೇಶ್ವರ ಬೆಟ್ಟಕ್ಕೆ ಬಂದರೂ ನಗರಕ್ಕೆ ಬಾರದ ಸಿಎಂ ಯಡಿಯೂರಪ್ಪ ವಿರುದ್ಧ ಜಿಲ್ಲೆಯ ಜನತೆ ಆಕ್ರೋಶ ಹೊರಹಾಕಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಹತ್ತಾರು ಬಾರಿ ನಗರಕ್ಕೆ ಭೇಟಿ ನೀಡಿ ನೂರಾರು ಕೋಟಿ ರೂ. ಅನುದಾನ ನೀಡಿದ್ದರು. ಜೊತೆಗೆ 5 ವರ್ಷಗಳ ಕಾಲ ಆಡಳಿತ ನಡೆಸಿ ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗಲಿದೆ ಎಂಬ ಮೌಢ್ಯವನ್ನು ಅಳಿಸಿದ್ದರು. ಆದರೆ ಯಡಿಯೂರಪ್ಪ ಮಾತ್ರ ಅಧಿಕಾರ ವಹಿಸಿಕೊಂಡು 15 ತಿಂಗಳಾದರೂ ನಗರಕ್ಕೆ ಬರಲು ಮನಸ್ಸು ಮಾಡುತ್ತಿಲ್ಲ. ಎರಡು ದಿನ ಜಿಲ್ಲಾ ಪ್ರವಾಸ ಕೈಗೊಂಡರೂ ಚಾಮರಾಜನಗರಕ್ಕೆ ಆಗಮಿಸದಿರುವುದು ಜನಾಕ್ರೋಶಕ್ಕೆ ಕಾರಣರಾಗಿದ್ದಾರೆ.