ಕರ್ನಾಟಕ

karnataka

ETV Bharat / state

ಚಾಮರಾಜನಗರ: ವಿಚಿತ್ರ ಚರ್ಮ ರೋಗಕ್ಕೆ ತುತ್ತಾದ ಮಕ್ಕಳನ್ನು ಭೇಟಿಯಾದ ಜಿಲ್ಲಾಧಿಕಾರಿ

ಚರ್ಮ ರೋಗ ಕಾಣಿಸಿಕೊಂಡ ಹನೂರು ತಾಲೂಕಿನ ಗ್ರಾಮಗಳಿಗೆ ಇಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

collector-meets-children-with-strange-skin-disease-in-chamarajanagara
ಚಾಮರಾಜನಗರ: ವಿಚಿತ್ರ ಚರ್ಮ ರೋಗಕ್ಕೆ ತುತ್ತಾದ ಮಕ್ಕಳನ್ನು ಭೇಟಿಯಾದ ಜಿಲ್ಲಾಧಿಕಾರಿ

By

Published : Jul 29, 2023, 7:51 PM IST

Updated : Jul 29, 2023, 8:19 PM IST

ಚಾಮರಾಜನಗರ:ವಿಚಿತ್ರ ಚರ್ಮ ರೋಗ ಕಾಣಿಸಿಕೊಂಡಿರುವ ಹನೂರು ತಾಲೂಕಿನ ಭದ್ರಯ್ಯನಹಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮಗಳಿಗೆ ಇಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಜಿಲ್ಲೆಯ ಹನೂರು ತಾಲೂಕಿನ ಶೆಟ್ಟಳ್ಳಿ ಹಾಗೂ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮೂರು ಗ್ರಾಮಗಳಲ್ಲಿ ಈ ಚರ್ಮರೋಗ ಖಾಯಿಲೆಯು ಐದು ಮಂದಿಯಲ್ಲಿ ಕಾಣಿಸಿಕೊಂಡಿದೆ. ಈ ಬಗ್ಗೆ ಡಿಸಿ ಗ್ರಾಮಗಳಿಗೆ ಭೇಟಿ ನೀಡಿ ರೋಗಕ್ಕೆ ತುತ್ತಾದ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ.

ಬೆಂಗಳೂರಿನಲ್ಲಿ ಮೂವರು, ಹನೂರಿನಲ್ಲಿ ಇಬ್ಬರು ರೋಗಿಗಳು ಚಿಕಿತ್ಸೆಗಾಗಿ ಮುಂದಾಗಿದ್ದಾರೆ, ಇದರಲ್ಲಿ ಒಂದು ಮಗು ಆರೋಗ್ಯವಾಗಿದೆ. ಇಬ್ಬರಿಗೆ ಕಣ್ಣಿನ ತೊಂದರೆ ಇದೆ. ಹೀಗಾಗಿ ತಪಾಸಣೆ ಬಳಿಕ ಚಿಕಿತ್ಸೆ ಕೋಡಿಸಲಾಗುತ್ತದೆ. ಭಾರತದಲ್ಲಿ ಅಲ್ಲಲ್ಲಿ ಕೆಲವರಲ್ಲಿ ಈ ಖಾಯಿಲೆ ಕಾಣಸಿ ಕೊಳ್ಳುತ್ತದೆ. ಈ ಬಗ್ಗೆ ಜನರು ಆತಂಕಕ್ಕೆ ಒಳಗಾಗಬಾರದು, ಸಂಬಂಧಿಕರಲ್ಲೇ ಮದುವೆ ಮಾಡುವುದನ್ನು ಕಡಿಮೆ ಮಾಡಬೇಕು. ಖಾಯಿಲೆ ಇದ್ದವರು ಮುನ್ನೆಚ್ಚರಿಕೆ ಚಿಕಿತ್ಸೆ ಪಡೆಯುವಂತೆ ಅರಿವು ಮೂಡಿಸಲಾಗುತ್ತಿದೆ ಎಂದು ವೈದ್ಯರು ಜಿಲ್ಲಾಧಿಕಾರಿ ಶಿಲ್ಪಾನಾಗ್​ಗೆ ಮಾಹಿತಿ ನೀಡಿದರು.

ವಿಚಿತ್ರ ಚರ್ಮ ರೋಗ

ಈ ರೋಗಕ್ಕೆ ಹನೂರು ತಾಲೂಕಿನಲ್ಲಿ 13 ಮಕ್ಕಳು ತುತ್ತಾಗಿದ್ದು, ಕಳೆದ 2015ರಲ್ಲಿ 8 ಮಕ್ಕಳು ಮೃತಪಟ್ಟಿದ್ದರು. ಮತ್ತೆ ಈಗ ಐದು ಮಕ್ಕಳಲ್ಲಿ ಈ ರೋಗ ಕಾಣಿಸಿಕೊಂಡಿದೆ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಯ ಬಳಿ ಅಳಲು ತೋಡಿಕೊಂಡರು. ನಂತರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಈ ರೋಗದ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಏನು ಪರಿಹಾರ ಮಾಡಬಹುದು ಎಂಬ ಬಗ್ಗೆ ಚರ್ಚಿಸಲಾಗುವುದು. ಮಾನವೀಯತೆ ದೃಷ್ಟಿಯಿಂದ ಪ್ರತಿ ತಿಂಗಳು ಮಾಸಾಶನ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ವೈದ್ಯರ ಪ್ರಕಾರ ರಕ್ತ ಸಂಬಂಧಗಳಲ್ಲಿ ಮದುವೆಯಾಗುವುದರಿಂದ ಈ ರೋಗವು ಕಾಣಿಸಿಕೊಳ್ಳುತ್ತದೆ. ಆದಷ್ಟು ಗ್ರಾಮಸ್ಥರು ಸಂಬಂಧಿಕರಲ್ಲೇ ಮದುವೆಯಾಗುವುದನ್ನು ಕಡಿಮೆ ಮಾಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ:ರಾಜ್ಯದಲ್ಲಿ ಹೆಚ್ಚಿದ ಮುಂಗಾರು ಮಳೆ ಆರ್ಭಟ: ಸಾಂಕ್ರಾಮಿಕ ರೋಗಗಳ ಹರಡುವಿಕೆಯಿಂದ ಮುನ್ನೆಚ್ಚರಿಕೆ ವಹಿಸುವುದು ಹೇಗೆ?

ಏನಿದು ರೋಗ?:ಕೈ ಕಾಲು, ಮುಖದ ಮೇಲೆ ಕಪ್ಪು ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವ ರೋಗಕ್ಕೆ ಚುಕ್ಕಿ ಚರ್ಮರೋಗ ಎಂದು ಕರೆಯಲಾಗುತ್ತದೆ. ಮಕ್ಕಳಿಗೆ ಒಂಬತ್ತು ವರ್ಷ ತುಂಬಿದ ನಂತರ ಚರ್ಮದಲ್ಲಿ ಹುಣ್ಣು, ಬಿಳಿ ಮಚ್ಚೆ, ಚರ್ಮ ಕಪ್ಪು ಬಣ್ಣಕ್ಕೆ ತಿರುಗುವುದು, ಕಣ್ಣು ಊದಿಕೊಳ್ಳುವಿಕೆ ಈ ರೀತಿ ನಾನಾ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸದ್ಯ ಹನೂರು ಸುತ್ತಲಿನ 4 ಕ್ಕೂ ಹೆಚ್ಚಿನ ಮಕ್ಕಳಲ್ಲಿ ರೋಗ ಲಕ್ಷಣ ಪತ್ತೆಯಾಗಿದೆ. ಇತ್ತ ವೈದ್ಯರ ಪ್ರಕಾರ ಈ ರೋಗವು ಅನುವಂಶೀಕವಾಗಿ ಕಾಣಿಸಿಕೊಳ್ಳುತ್ತಿದೆ. ಇದರಿಂದ ಮಕ್ಕಳು ಶಾಲೆಗೆ ಹೋಗಲು ಸಹ ಹಿಂದೇಟು ಹಾಕುವ ಪರಿಸ್ಥಿತಿ ಸಹ ನಿರ್ಮಾಣವಾಗಿದೆ. ಗ್ರಾಮಗಳಿಗೆ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಚಂದ್ರಶೇಖರ್, ಹನೂರು ತಾಲೂಕು ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

Last Updated : Jul 29, 2023, 8:19 PM IST

ABOUT THE AUTHOR

...view details