ಚಾಮರಾಜನಗರ: ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲೇ ಓರ್ವ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಯಾನಗಹಳ್ಳಿ ರಸ್ತೆಯಲ್ಲಿ ನಡೆದಿದೆ.
ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..! - ಬೈಕ್ ಸವಾರ ಸ್ಥಳದಲ್ಲೇ ಸಾವು
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲೇ ಓರ್ವ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಯಾನಗಹಳ್ಳಿ ರಸ್ತೆಯಲ್ಲಿ ನಡೆದಿದೆ.
ಎರಡು ಬೈಕ್ಗಳ ನಡುವೆ ಮುಖಾಮುಖಿ
ಎಣಗುಂಬ ಗ್ರಾಮದ ರಂಗಸ್ವಾಮಿ (20) ಮೃತ ದುರ್ದೈವಿಯಾಗಿದ್ದು, ಯಾನಗಹಳ್ಳಿ ಗ್ರಾಮದ ಸಿದ್ದಾಚಾರಿ ಎಂಬ ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ ಎಂದು ತಿಳಿದು ಬಂದಿದ್ದು, ತಿರುವಿನಲ್ಲಿ ವೇಗವಾಗಿ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಸದ್ಯ, ಮೃತದೇಹವನ್ನು ಶವಾಗಾರಕ್ಕೆ ರವಾನಿಸಿ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.