ಚಾಮರಾಜನಗರ:ನೆರೆ ಪರಿಹಾರವನ್ನು ಕೇಂದ್ರ ಸರ್ಕಾರದ ಬಳಿ ಕೇಳಲು ಬಿಜೆಪಿ ಸಂಸದರಿಗೆ ಗಂಡಸ್ತನವಿಲ್ಲ ಎಂದು ಶಾಸಕ ಪುಟ್ಟರಂಗಶೆಟ್ಟಿ ವಾಗ್ದಾಳಿ ನಡೆಸಿದರು.
ಪ್ರವಾಹ ಪರಿಹಾರ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿ, ಜಿಲ್ಲಾ ಕಾಂಗ್ರೆಸ್ ಘಟಕ ಜಿಲ್ಲಾಡಳಿತ ಭವನದ ಮುಂಭಾಗ ನಡೆಸಿದ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ರು. ಯಡಿಯೂರಪ್ಪ ಕುರ್ಚಿಗೆ ಅಂಟಿಕೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ಪರಿಹಾರ ಕೇಳಿದರೆ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕುವ ಭೀತಿ ಅವರಲ್ಲಿದೆ. ಓಟ್ ಬ್ಯಾಂಕ್‌ಗೋಸ್ಕರ ಯಡಿಯೂರಪ್ಪನವರನ್ನು ಬಿಜೆಪಿ ಇಟ್ಟುಕೊಂಡಿದೆ ಎಂದು ಅವರು ಕಿಡಿಕಾರಿದರು.