ಚಾಮರಾಜನಗರ :ಕೋವಿಡ್ನಿಂದ ಮೃತರಾದವರ ಕುಟುಂಬಕ್ಕೆ ಸಾಂತ್ವನ ಹೇಳುವ ಕಾಂಗ್ರೆಸ್ ಅಭಿಯಾನಕ್ಕೆ ಭಾನುವಾರದಂದು ಚಾಮರಾಜನಗರದಿಂದ ಚಾಲನೆ ದೊರೆಯಲಿದೆ. 'ಕೋವಿಡ್ ಸಂತ್ರಸ್ತರಿಗೆ ಸಾಂತ್ವನ' ಎಂಬ ಈ ಅಭಿಯಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹನೂರಿನಲ್ಲಿ ಚಾಲನೆ ನೀಡಲಿದ್ದಾರೆ. ಬಳಿಕ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭೇಟಿ ಕೊಟ್ಟು ಕುಟುಂಬ ಸದಸ್ಯರಿಂದ ಮಾಹಿತಿ ಪಡೆಯಲಿದ್ದಾರೆ.
ಇದನ್ನೂ ಓದಿ:ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ರಾಜ್ಯಕ್ಕೆ ಎರಡು ಸ್ಥಾನ : ಸಚಿವ ಕೆ ಎಸ್ ಈಶ್ವರಪ್ಪ ಮನವಿ