ಕರ್ನಾಟಕ

karnataka

ETV Bharat / state

ರಸ್ತೆ ತಡೆದು ಬಿಜೆಪಿ ವಿರುದ್ಧ ಕಾಂಗ್ರೆಸ್​​ ಪ್ರತಿಭಟನೆ - undefined

ರಾಜೀವ್​ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ

By

Published : May 18, 2019, 5:48 PM IST

ಚಾಮರಾಜನಗರ: ರಾಜೀವ್ ಗಾಂಧಿ ಅವರನ್ನು ಉಗ್ರ ಎಂದು ಹೇಳಿಕೆ ನೀಡಿರುವ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿರುವ ಸಾಧ್ವಿ ಪ್ರಜ್ಞಾ ಸಿಂಗ್, ಅನಂತಕುಮಾರ್ ಹೆಗಡೆ ಹೇಳಿಕೆಗಳನ್ನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿದೆ.

ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ

ಚಾಮರಾಜೇಶ್ವರ ದೇಗುಲದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರ ಕೂಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಪ್ರಜಾಪ್ರಭುತ್ವ ವ್ಯವಸ್ಥಯಲ್ಲಿದ್ದುಕೊಂಡು ಮಾನಸಿಕ ಅಸ್ವಸ್ಥರಂತೆ ಬಿಜೆಪಿ ನಾಯಕರು ಮಾತನಾಡುತ್ತಿರುವುದು ಸರಿಯಲ್ಲ. ಕೂಡಲೇ, ದೇಶದ್ರೋಹ ಹಾಗೂ ಕೊಲೆ ಮಾಡಲು ಪ್ರೇರೇಪಣೆ ನೀಡುವ ಪ್ರಕರಣಗಳಡಿಯಲ್ಲಿ ಹೆಗಡೆ, ಕಟೀಲ್ ಮತ್ತು ಸಾಧ್ವಿ ಪ್ರಜ್ಞಾ ಸಿಂಗ್​ರನ್ನು ಬಂಧಿಸಬೇಕೆಂದು ಒತ್ತಾಯಿಸಿ ಮೂವರ ಭಾವಚಿತ್ರಗಳಿಗೂ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದರು.

For All Latest Updates

TAGGED:

ABOUT THE AUTHOR

...view details