ಕರ್ನಾಟಕ

karnataka

ETV Bharat / state

ಚಾಮರಾಜನಗರದಲ್ಲಿಂದು 99 ಮಂದಿಗೆ ಕೊರೊನಾ: ಮಹಾಮಾರಿಗೆ ನಾಲ್ವರು ಬಲಿ - coronavirus updates

ಚಾಮರಾಜನಗರ ತಾಲೂಕಿನ ಕಾಳನಹುಂಡಿ ಗ್ರಾಮದ 60 ವರ್ಷದ ವ್ಯಕ್ತಿ ಸೆ.25 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಸೆ.28 ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Corona firm to 99 in Chamarajanagar
ಚಾಮರಾಜನಗರದಲ್ಲಿಂದು 99 ಮಂದಿಗೆ ಕೊರೊನಾ

By

Published : Sep 29, 2020, 9:07 PM IST

ಚಾಮರಾಜನಗರ: ಜಿಲ್ಲೆಯಲ್ಲಿಂದು 99 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 3985ಕ್ಕೆ ಏರಿಕೆಯಾಗಿದೆ. ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ.

ಇಂದು 59 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 687 ಆಗಿದೆ. 38 ಮಂದಿ ಸೋಂಕಿತರು ಐಸಿಯುನಲ್ಲಿದ್ದು 314 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ‌. 821 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.

ಚಾಮರಾಜನಗರ ತಾಲೂಕಿನ ಕಾಳನಹುಂಡಿ ಗ್ರಾಮದ 60 ವರ್ಷದ ವ್ಯಕ್ತಿ ಸೆ.25 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಸೆ.28 ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಗುಂಡ್ಲುಪೇಟೆಯ 80 ವರ್ಷದ ವೃದ್ಧೆ ಸೆ.8 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಸೆ.28 ಕ್ಕೆ ನಿಧನರಾಗಿದ್ದಾರೆ. ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ 55 ವರ್ಷದ ವ್ಯಕ್ತಿ ಸೋಂಕಿತರಾಗಿ ಸೆ.22 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಅಸುನೀಗಿದ್ದಾರೆ. ಯಳಂದೂರಿನ 52 ವರ್ಷದ ವ್ಯಕ್ತಿ ಕಳೆದ ಶನಿವಾರ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಭಾನುವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮಹಾಮಾರಿಗೆ 65 ಮಂದಿ ಮೃತಪಟ್ಟಿದ್ದು ಕೋವಿಡೇತರ ಕಾರಣಕ್ಕೆ 28 ಮಂದಿ ಸಾವನ್ನಪ್ಪಿದ್ದಾರೆ.

ABOUT THE AUTHOR

...view details