ಕರ್ನಾಟಕ

karnataka

ETV Bharat / state

ಇಬ್ಬರು ಶಾಲಾ ಮಕ್ಕಳಿಗೆ ಕೊರೊನಾ ಸೋಂಕು : ಎರಡು ದಿನ ಈ ಸರ್ಕಾರಿ ಶಾಲೆಗೆ ರಜೆ - chamarajanagar latest news

ಇಂದು ಜಿಲ್ಲೆಯಲ್ಲಿ ಮೂವರಿಗೆ ಕೊರೊನಾ ಸೋಂಕು ತಗುಲಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 28ಕ್ಕೆ ಏರಿಕೆ ಕಂಡಿದೆ. ಪರೀಕ್ಷೆಯನ್ನು ಹೆಚ್ಚು ಮಾಡಲಾಗುತ್ತಿದೆ..

ಇಬ್ಬರು ಶಾಲಾ ಮಕ್ಕಳಿಗೆ ಸೋಂಕು
ಇಬ್ಬರು ಶಾಲಾ ಮಕ್ಕಳಿಗೆ ಸೋಂಕು

By

Published : Nov 30, 2021, 8:35 PM IST

Updated : Nov 30, 2021, 8:48 PM IST

ಚಾಮರಾಜನಗರ: ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಬೆನ್ನಲ್ಲೇ ಇದೀಗ ಇಬ್ಬರು ಶಾಲಾ ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕೊಡಗಾಪುರ ಶಾಲೆಯಲ್ಲಿ ನಡೆದಿದೆ.

ಸದ್ಯ, ಉಳಿದ 70 ಮಂದಿ ವಿದ್ಯಾರ್ಥಿಗಳನ್ನು ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಬರುವ ತನಕ ಅಂದರೆ ಎರಡು ದಿನ ಶಾಲೆಗೆ ರಜೆ ಘೋಷಿಸಲಾಗಿದೆ.

ಶಿಕ್ಷಕನಿಗೆ ಕೊರೊನಾ ಬಂದ ಹಿನ್ನೆಲೆಯಲ್ಲಿ ಕಬ್ಬಹಳ್ಳಿ ಶಾಲೆಯ 165 ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿ ವರದಿ ಬರುವ ತನಕ ಎಲ್ಲಾ ವಿದ್ಯಾರ್ಥಿಗಳಿಗೂ ರಜೆ ನೀಡಿ, ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ.

ಇಂದು ಜಿಲ್ಲೆಯಲ್ಲಿ ಮೂವರಿಗೆ ಸೋಂಕು ತಗುಲಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 28ಕ್ಕೆ ಏರಿಕೆ ಕಂಡಿದೆ. ಪರೀಕ್ಷೆಯನ್ನು ಹೆಚ್ಚು ಮಾಡಲಾಗುತ್ತಿದೆ.

Last Updated : Nov 30, 2021, 8:48 PM IST

ABOUT THE AUTHOR

...view details