ಚಾಮರಾಜನಗರ: ಇಂದು ಕೋವಿಡ್ನಿಂದ ಇಬ್ಬರು ಮೃತಪಡುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಹೊಸದಾಗಿ ಜಿಲ್ಲೆಯಲ್ಲಿ 39 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 700ರ ಗಡಿ ದಾಟಿದೆ.
46 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 236 ಹಾಗೂ 609 ಮಂದಿಯ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ. 5 ಸಾವಿರಕ್ಕೂ ಹೆಚ್ಚು ಜನರಿಗೆ ಇಂದು ಆ್ಯಂಟಿಜೆನ್ ಟೆಸ್ಟ್ ಮಾಡಲಾಗಿದೆ.