ಕರ್ನಾಟಕ

karnataka

ETV Bharat / state

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಸಿಗದೆ ಪ್ರಾಣಬಿಟ್ಟ ಸೋಂಕಿತ: ಸಂಬಂಧಿಕರಿಂದ ಗಲಾಟೆ - Chamarajanagar latest news

ಸ್ಯಾಚುರೇಷನ್ ಕಡಿಮೆಯಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಅಡ್ಮಿಟ್ ಆಗಲು ಬಂದಿದ್ದ ಕೊರೊನಾ ಸೋಂಕಿತ ಅರ್ಧ ತಾಸು ಕಾದರೂ ಬೆಡ್ ಸಿಗದಿದ್ದರಿಂದ ಆಸ್ಪತ್ರೆ ಆವರಣದಲ್ಲೇ ಮೃತಪಟ್ಟಿದ್ದಾನೆ. ಇದರಿಂದ ರೊಚ್ಚಿಗೆದ್ದ ಸಂಬಂಧಿಕರು, ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿ ಆಸ್ಪತ್ರೆ ಕಿಟಕಿ ಗಾಜುಗಳನ್ನು ಪುಡಿ ಮಾಡಿದ್ದಾರೆ.

Chamarajanagar
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಸಿಗದೇ ಸೋಂಕಿತ ಸಾವು

By

Published : May 5, 2021, 9:55 AM IST

ಚಾಮರಾಜನಗರ: ಹೋಮ್​​ ಐಸೋಲೇಷನ್​ನಲ್ಲಿದ್ದ ಸೋಂಕಿತನಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ಆಸ್ಪತ್ರೆಗೆ ಬಂದಾಗ ಬೆಡ್ ಸಿಗದೆ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ನಗರದ ಅಂಬೇಡ್ಕರ್ ಬಡಾವಣೆಯ 25 ವರ್ಷದ ಯುವಕ ಮೃತ ದುರ್ದೈವಿ. ಸ್ಯಾಚುರೇಷನ್ ಕಡಿಮೆಯಾಗಿ ಅಡ್ಮಿಟ್ ಆಗಲು ಬಂದಿದ್ದ ಈತ, ಅರ್ಧ ತಾಸು ಕಾದರೂ ಬೆಡ್ ಸಿಗದಿದ್ದರಿಂದ ಆಸ್ಪತ್ರೆ ಆವರಣದಲ್ಲೇ ಮೃತಪಟ್ಟಿದ್ದಾನೆ. ಇದರಿಂದ ರೊಚ್ಚಿಗೆದ್ದ ಸಂಬಂಧಿಕರು, ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿ ಆಸ್ಪತ್ರೆಯ ಕಿಟಕಿ ಗಾಜುಗಳನ್ನು ಪುಡಿ ಮಾಡಿದ್ದಾರೆ.

ಬಳಿಕ ಸ್ಥಳಕ್ಕೆ ದೌಡಾಯಿಸಿ ಮಹಿಳಾ ಠಾಣೆ ಪಿಐ ಪುಟ್ಟಸ್ವಾಮಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಓದಿ:ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಐವರು ಮೃತ ... 4ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಸಾವು

ABOUT THE AUTHOR

...view details