ಚಾಮರಾಜನಗರ:ನಗರದ ಹೊರವಲಯದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ 14 ವಿದ್ಯಾರ್ಥಿಗಳು ಹಾಗೂ ಓರ್ವ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ರಾಜ್ಯದ ವಿವಿಧ ಭಾಗಗಳಿಂದ ಬಿಎಸ್ಸಿ ಕೃಷಿ ಅಧ್ಯಯನಕ್ಕೆ ಬಂದಿದ್ದ 60 ಮಂದಿ ವಿದ್ಯಾರ್ಥಿಗಳಲ್ಲಿ 14 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಇನ್ನೂ 40 ವಿದ್ಯಾರ್ಥಿಗಳ ವರದಿ ಬರಬೇಕಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸೋಂಕಿತ ಸಿಬ್ಬಂದಿವೋರ್ವರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. 12 ಮಂದಿ ಅಧ್ಯಾಪಕರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.