ಚಾಮರಾಜನಗರ:ಜಿಲ್ಲೆಯಲ್ಲಿಂದು 13 ಮಕ್ಕಳು ಸೇರಿ 48 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 1,151ಕ್ಕೆ ಏರಿಕೆಯಾಗಿದೆ.
ಚಾಮರಾಜನಗರದ 55 ವರ್ಷದ ಮಹಿಳೆ ಹಾಗೂ 48 ವರ್ಷದ ವ್ಯಕ್ತಿ ಒಳರೋಗಿಗಳಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದು, ಇವರ ಗಂಟಲುದ್ರವ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಪಿಎಫ್ಐ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಖಬರ್ ಸ್ಥಾನದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.