ಚಾಮರಾಜನಗರ: ಇಂದು ಜಿಲ್ಲೆಯಲ್ಲಿ ಹೊಸದಾಗಿ 39 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1640 ಕ್ಕೆ ಏರಿಕೆಯಾಗಿದೆ. ಓರ್ವ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ.
49 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದು, ಸಕ್ರಿಯ ಪ್ರಕರಣಗಳು 413 ಕ್ಕೆ ಇಳಿದಿದೆ. 149 ಮಂದಿ ಹೋಂ ಐಸೋಲೇಷನ್ನಲ್ಲಿದ್ದು, 953 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಜಿಲ್ಲೆಯಲ್ಲಿ ಗುಣಮುಖಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದುವರೆಗೆ 1196 ಮಂದಿ ಬಿಡುಗಡೆಯಾಗಿದ್ದಾರೆ.