ಚಾಮರಾಜನಗರ: ದೀಪಾವಳಿ ವಿಶೇಷ ಪೂಜೆಯಲ್ಲಿ ಜನದಟ್ಟಣೆಯಾಗಿ ಸಾಂಕ್ರಾಮಿಕ ರೋಗ ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿಯಲ್ಲಿರುವ ಕೊಂಗಳ್ಳಿ ಬೆಟ್ಟಕ್ಕೆ ಬರೋಬ್ಬರಿ 2 ತಿಂಗಳು ಹಾಗೂ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ 3 ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಕೋವಿಡ್ ಭೀತಿ: ಕೊಂಗಳ್ಳಿ ಬೆಟ್ಟಕ್ಕೆ 2 ತಿಂಗಳು, ಮಾದಪ್ಪನ ಬೆಟ್ಟಕ್ಕೆ 3 ದಿನ ನಿರ್ಬಂಧ - Restriction of pilgrims in kongalli hill
ತಮಿಳುನಾಡಿನ ತಾಳವಾಡಿ ತಾಲೂಕಿನ ಕೊಂಗಳ್ಳಿ ಬೆಟ್ಟಕ್ಕೆ ನ. 15 ರಿಂದ 2021ರ ಜ.12ರವರೆಗೆ ಭಕ್ತರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಇತ್ತ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುವ ದೀಪಾವಳಿ ರಥೋತ್ಸವವನ್ನು ಸಹ ರದ್ದುಗೊಳಿಸಲಾಗಿದೆ.
ತಮಿಳುನಾಡಿನ ತಾಳವಾಡಿ ತಾಲೂಕಿನ ಕೊಂಗಳ್ಳಿ ಬೆಟ್ಟಕ್ಕೆ ನ.15 ರಿಂದ 2021ರ ಜ.12ರವರೆಗೆ ಭಕ್ತರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ ಎಂದು ದೇವಾಸ್ಥಾನದ ಅರ್ಚಕ ಮಲ್ಲಿಕಾರ್ಜುನ 'ಈಟಿವಿ ಭಾರತ'ಕ್ಕೆ ತಿಳಿಸಿದ್ದಾರೆ.
ರಥೋತ್ಸವ ರದ್ದು: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುವ ದೀಪಾವಳಿ ರಥೋತ್ಸವವನ್ನು ರದ್ದುಗೊಳಿಸಲಾಗಿದೆ. ದೀಪಾವಳಿ ವೇಳೆ ಬೆಟ್ಟಕ್ಕೆ 2.5 ರಿಂದ 3 ಲಕ್ಷ ಭಕ್ತಾದಿಗಳು ಹರಿದು ಬರುವುದರಿಂದ ಕೊರೊನಾ ಮುಂಜಾಗ್ರತಾ ಕ್ರಮವಾಗಿ ನ.13ರ ಸಂಜೆ 7 ರಿಂದ 16ರ ಬೆಳಗ್ಗೆ 7ರವರೆಗೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದರೆ, ಸಾಂಪ್ರದಾಯಿಕವಾಗಿ ಹಾಲರವೆ ಉತ್ಸವ ಮತ್ತು ತೆಪ್ಪೋತ್ಸವವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಗುತ್ತದೆ.