ಚಾಮರಾಜನಗರ: ನಾಪತ್ತೆಯಾಗಿದ್ದ ಸೋಂಕಿತನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಕುಂಭೇಶ್ವರ ಕಾಲೋನಿಯಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ನಾಗವಳ್ಳಿ ಗ್ರಾಮದ 45 ವರ್ಷದ ಸೋಂಕಿತ ಮೃತಪಟ್ಟಿರುವ ದುರ್ದೈವಿ. ಕಳೆದ 6ರಂದು ಇವರಿಗೆ ಸೋಂಕು ದೃಢಪಟ್ಟಿತ್ತು. ಬಳಿಕ ಮನೆಯ ಮೂವರು ಸದಸ್ಯರು ಸೋಂಕಿತರಾಗಿದ್ದರು. ಇದಾದ ಒಂದು ದಿನಕ್ಕೆ ನಾಪತ್ತೆಯಾಗಿದ್ದ ಇವರು ಇಂದು ಕುಂಭೇಶ್ವರ ಕಾಲೋನಿಯ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಮಹಾಮಾರಿಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ಇನ್ನೂ ದಾಖಲಾಗಿಲ್ಲ.