ಕರ್ನಾಟಕ

karnataka

ETV Bharat / state

ಚಾಮರಾಜನಗರ: ಹೊಸ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು.. ಇಂದೂ 7 ಮಂದಿ ಬಲಿ - ಚಾಮರಾಜನಗರ ಕೊರೊನಾ ಸಾವು

ಚಾಮರಾಜನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ 665 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 7 ಮಂದಿ ಬಲಿಯಾಗಿದ್ದಾರೆ.

ಚಾಮರಾಜನಗರ ಕೋವಿಡ್ ಆಸ್ಪತ್ರೆ
ಚಾಮರಾಜನಗರ ಕೋವಿಡ್ ಆಸ್ಪತ್ರೆ

By

Published : May 19, 2021, 8:40 PM IST

ಚಾಮರಾಜನಗರ: ಸತತ 4ನೇ ದಿನವೂ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಜಿಲ್ಲೆಯಲ್ಲಿ ಹೆಚ್ಚಿದ್ದು 576 ಹೊಸ ಕೋವಿಡ್ ಕೇಸ್ ಪತ್ತೆಯಾದರೆ 665 ಮಂದಿ ಮಹಾಮಾರಿಯಿಂದ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ‌ ಸಂಖ್ಯೆ 3,673ಕ್ಕೆ ಇಳಿದಿದ್ದು, 48 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2,242 ಮಂದಿ ಹೋಂ ಐಸೋಲೇಷನ್​​ನಲ್ಲಿದ್ದಾರೆ. 7,488 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. 2 ಸಾವಿರಕ್ಕೂ ಹೆಚ್ಚ ಟೆಸ್ಟ್ ನಡೆಸುತ್ತಿದ್ದ ಆರೋಗ್ಯ ಇಲಾಖೆ ಇಂದು ಕೇವಲ 1,595 ಮಂದಿಗಷ್ಟೇ ಪರೀಕ್ಷೆ ನಡೆಸಿದೆ.

7 ಮಂದಿ ಸಾವು

ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದರೂ ಸಾವಿನ ಸರಣಿ ಮಾತ್ರ ಮುಂದುವರಿದಿದೆ. ಇಂದು 7 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 323ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ: ತಗ್ಗದ ಸಾವಿನ ಪ್ರಮಾಣ

ABOUT THE AUTHOR

...view details